DAKSHINA KANNADA
ಸುಬ್ರಹ್ಮಣ್ಯ – ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿತ

ಸುಬ್ರಹ್ಮಣ್ಯ, ಜನವರಿ 6: ದಕ್ಷಿಣಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿದ್ದು, ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನೊಬ್ಬನಿಗೆ ತಂಡವೊಂದು ಮಾರಣವಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಕಲ್ಲುಗುಂಡಿಯ ಅಫೀದ್ ಥಳಿತಗೊಳಗಾದ ಯುವಕ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕ ವಿದ್ಯಾರ್ಥಿನಿಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ತಿರುಗಾಡುತ್ತಿದ್ದ ಎಂದು ಹೇಳಲಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಸ್ ಸ್ಟ್ಯಾಂಡ್ ನಲ್ಲಿ ಈ ಜೋಡಿ ಕಂಡು ಬಂದಿದ್ದು, ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಅರೆಬೆತ್ತಲೆಗೊಳಿಸಿ ತೀವ್ರವಾಗಿ ಥಳಿಸಿದೆ. ಹಲ್ಲೆಗೊಳಗಾದ ಯುವಕನ ಬೆನ್ನಲ್ಲಿ ರಕ್ತ ಹೆಪ್ಪುಗಟ್ಟಿದೆ. ಅಫೀದ್ ನೀಡಿರುವ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆಯಿಂದಲೂ ಪೊಲೀಸ್ ದೂರು ನೀಡಿದ್ದು , ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪೋಸ್ಕೋ ಪ್ರಕರಣ ದಾಖಲಿಸಿದ್ದಾರೆ.