LATEST NEWS
ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ – ಮೂವರು ವಿಧ್ಯಾರ್ಥಿಗಳ ಮೇಲೆ ದಾಳಿ
ಉಳ್ಳಾಲ ಜೂನ್ 1: ಸೋಮೇಶ್ವರ ಬಿಚ್ ಗೆ ಬಂದಿದ್ದ ವಿಧ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಖಾಸಗಿ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ಆಗಮಿಸಿದ್ದರು. ಇದರಲ್ಲಿ ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು.
ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಇದರಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ಸು ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
You must be logged in to post a comment Login