ಪುತ್ತೂರು ನವೆಂಬರ್ 06: ಜೊತೆಗೆ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪರಿಯಡ್ಕ ಎಂಬಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ – ಬಜ್ಪೆ – 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ
ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿಯೊಬ್ಬ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯರು ಆತನ ಮನೆಗೆ ದಿನಾಂಕ 06-11-2025 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿಧ್ಯಾರ್ಥಿಗಳನ್ನು ಅಡ್ಡಗಟ್ಟಿ ವಿಧ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿಧ್ಯಾರ್ಥಿಗೆ ಹಲ್ಲೆ ನಡೆಸಿರುತ್ತಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 107/2025, ಕಲಂ: 126(2), 352, 351(2), 115(2), 353(2) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತರನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದೆ.



