LATEST NEWS
ಸಿನಿಮಾ ಮಂದಿರಗಳಿಗೆ ಶೇ 50ಕ್ಕಿಂತ ಹೆಚ್ಚಿನ ಆಸನ ಭರ್ತಿಗೆ ಅವಕಾಶ
ನವದೆಹಲಿ, ಜನವರಿ 27 : ಕೊರೋನಾ ವೈರಸ್ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಚಿತ್ರ ಮಂದಿರದಲ್ಲಿ ಶೇ 50ಕ್ಕಿಂತ ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಸ್ಒಪಿ ಹೊರಡಿಸಿದೆ.
ಇದೇ ವೇಳೆ ಈಜುಕೊಳವನ್ನು ಪೂರ್ಣ ಪ್ರಮಾಣದಲ್ಲಿ ಎಲ್ಲಾರಿಗೂ ಮುಕ್ತ ಅವಕಾಶ ನೀಡಿ ತೆರೆಯುವಂತೆ ತಿಳಿಸಲಾಗಿದೆ. ಈ ಕುರಿತು ಯುವ ಕ್ರೀಡಾ ಸಚಿವಲಾಯದ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಕೇಂಂದ್ರ ಚಿತ್ರ ಮಂದಿರಗಳಲ್ಲಿ ಶೇ. 50 ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿತ್ತು. ಈಗ ಈ ನಿಯಮಗಳನ್ನು ಸಡಿಲಿಕೆ ಮಾಡಿ ಆದೇಶ ನೀಡಿದೆ.
Cinema halls and theatres have already been permitted upto 50% of seating capacity. Now they will be permitted to operate at higher seating capacity, for which a revised SOP will be issued by Ministry of Information & Broadcasting: Union Home Ministry
— ANI (@ANI) January 27, 2021
ಈ ಹಿಂದೆ ಕ್ರೀಡಾ ಉದ್ದೇಶಕ್ಕಾಗಿ ಮಾತ್ರ ಬಳಕೆಗೆ ಅನುಮತಿ ಇದ್ದ ಈಜುಕೊಳ ಬಳಕೆಗೂ ಕೂಡ ಈಗ ಎಲ್ಲರಿಗೂ ಅವಕಾಶ ನೀಡಲು ಅನುಮತಿ ನೀಡಲಾಗಿದೆ. ಈ ಹೊಸ ಮಾರ್ಗಸೂಚಿಗಳನ್ನು ರಾಜ್ಯಳನ್ನು ಫೆ 1 ರಿಂದ ಫೇ. 28ರವರೆಗೆ ವಿಸ್ತರಿಸಲಾಗಿದೆ. ಹೊಸ ಮಾರ್ಗಸೂಚಿಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಪಾಲಿಸಬೇಕು. ಅಲ್ಲದೇ ಕಟ್ಟು ನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ.
ವ್ಯಕ್ತಿಗಳು ಸಂಚಾರ ಮತ್ತು ಸರಕುಗಳ ಸಾಗಾಟಕ್ಕೆ ಅಂತರ-ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಹ ಸಂಚಾರಕ್ಕೆ ಪ್ರತ್ಯೇಕ ಅನುಮತಿ, ಅನುಮೋದನೆ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ. 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಸಹ-ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ