LATEST NEWS
ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಮಂಗಳೂರು ಜನವರಿ 22: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವು ಸಂಭವಿಸಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು.ಆದರೆ, ಆ ಸಂದರ್ಭದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಆದರೆ, ಸಂಜೆ ಆದರೂ ಮಗುವನ್ನು ಹೊರ ತೆಗೆಯದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂಜೆ ವೇಳೆಗೆ ತಾಯಿ ಸವಿತಾ ಕೂಡ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಮೃತಪಟ್ಟ ಬಳಿಕ ಮಗುವನ್ನು ಹೊರತೆಗೆದ ಆರೋಪ ಕೇಳಿಬಂದಿದೆ. ಪತಿ ಗಣೇಶ್, ಸಂಬಂಧಿಕರಿಂದ ವೈದ್ಯರ ವಿರುದ್ಧ ಆರೋಪ ವ್ಯಕ್ತವಾಗಿದೆ. ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
