Connect with us

    LATEST NEWS

    ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ತಾಯಿ ಮತ್ತು ಮಗಳು ನಾಪತ್ತೆ

    ಉಡುಪಿ ಮೇ 18: ಮದುವೆ ನಿಶ್ಚಿತಾರ್ಥಕ್ಕೆಂದು ಬಂದಿದ್ದ ತಾಯಿ ಮಗಳು ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.


    ನಾಪತ್ತೆಯಾದವರನ್ನು ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿ ಎಂದು ಗುರುತಿಸಲಾಗಿದ್ದು. ಇವರು ಮೇ 13ರಿಂದ ನಾಪತ್ತೆಯಾಗಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದರು. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

    ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ (0820-2561044), ಪೊಲೀಸ್‌ ವೃತ್ತ ನಿರೀಕ್ಷಕರು (0820-2561966) ಅನ್ನು ಸಂಪರ್ಕಿಸಲು ಬ್ರಹ್ಮಾವರ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *