Connect with us

    KARNATAKA

    ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್‌ನಿಂದ ಕೊಯ್ದು ಹತ್ಯೆ ಮಾಡಿದ ತಾಯಿ

    ಮಧುಗಿರಿ: ಒಂದು ವರ್ಷದ ಹೆಣ್ಣು ಮಗುವನ್ನು ತಾಯಿಯೇ ಬ್ಲೆಡ್ ನಿಂದ ಕೈಯನ್ನು ಕೊಯ್ದು ಹತ್ಯೆ ಮಾಡಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಕ್ರಿತೀಶ್ (1) ಕೊಲೆಯಾದ ಮಗು. ಶ್ವೇತಾ ಹತ್ಯೆ ಮಾಡಿದ ತಾಯಿ.


    ಪಟ್ಟಣದ ಡೂಂ ಲೈಟ್ ವೃತ್ತದ ಸಮೀಪ ಇರುವ ತಿಪ್ಪಾಪುರ ಛತ್ರದ ಹಿಂಭಾಗದ ಮನೆಯಲ್ಲಿ ಆಟವಾಡುತ್ತಿದ್ದ ಮಗು ಕ್ರಿತೀಶ್ ಕೈಯನ್ನು ಏಕಾಏಕಿ ಕೊಯ್ದುದಿದ್ದಾರೆ. ತೀವ್ರ ರಕ್ತ ಸ್ರಾವವಾಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ. ನಂತರ ತಾಯಿ ಶ್ವೇತಾ ಕತ್ತು ಕೊಯ್ದುಕೊಂಡಿದ್ದು, ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಶಿವಾನಂದ ಅವರ ಪತ್ನಿಯಾದ ಶ್ವೇತಾ ಮಾನಸಿಕ ಅಸ್ವಸ್ಥೆಯಾಗಿದ್ದು, ನಿಮಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಡಿವೈಎಸ್ ಪಿ.ಕೆ.ಎಸ್.ವೆಂಕಟೇಶ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧುಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply