Connect with us

KARNATAKA

4 ವರ್ಷದ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಂದ ಪಾಪಿ ತಾಯಿ….!!

ಬೆಂಗಳೂರು ಅಗಸ್ಟ್ 5: ತನ್ನ ನಾಲ್ಕು ವರ್ಷದ ಮಗಳನ್ನು 4ನೇ ಮಹಡಿಯಿಂದ ಎಸೆದು ತಾಯಿಯೊಬ್ಬಳು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಂಪಂಗಿ ರಾಮನಗರದ ಅದ್ವೈತ್‌ ಅಪಾರ್ಟ್‌ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ.


ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಸುಷ್ಮಾ ಪತಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಮಗು ಜೀತಿ ಬುದ್ದಿಮಾಂಧ್ಯತೆಯಿಂದ ಬಳಲುತ್ತಿದ್ದಳು ಎಂದು ಪಾಪಿ ತಾಯಿ ಸುಷ್ಮಾ ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ. ನಾಲ್ಕನೇ ಮಹಡಿಯಿಂದ ಎಸೆದ ಕಾರಣ ಮೇಲಿಂದ ಬಿದ್ದ ರಭಸಕ್ಕೆ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.

ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನು ರಕ್ಷಣೆ ಮಾಡಿರುವುದನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ.
ಪ್ರಕರಣ ಸಂಬಂಧ ತಾಯಿ ಸುಷ್ಮಾ ವಿರುದ್ದ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *