LATEST NEWS
ಪಟಾಕಿ ಸಿಡಿಸಿ ಸಂಭ್ರಮದಿಂದ ದೀಪಾವಳಿ ಆಚರಿಸಿ ಎಂದು ಕರೆ ನೀಡಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶ ನವೆಂಬರ್ 10: ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ನೆಪದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಸ್ವತಹ ಕೇಂದ್ರ ಸರಕರಾವೇ ಸೋಂಕಿತರ ಆರೋಗ್ಯದ ದೃಷ್ಟಿಯಿಂದ ಪಟಾಕಿ ಸಿಡಿಸದಿರುವುದು ಒಳ್ಳೆಯದು. ಈ ವರ್ಷದ ದೀಪಾವಳಿಗೆ ಪಟಾಕಿ ಸಿಡಿಸಬೇಡಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ಹಿನ್ನಲೆ ಹಲವು ರಾಜ್ಯಗಳು ಈಗಾಗಲೇ ದೀಪಾವಳಿ ಸಂದರ್ಭ ಪಟಾಕಿ ಸಿಡಿಸುವುದನ್ನು ಬ್ಯಾನ್ ಮಾಡಿವೆ.
ಆದರೆ ಮಧ್ಯ ಪ್ರದೇಶದ ಮುಖ್ಯಮಂತ್ರಿಗಳು ಮಾತ್ರ ಪಟಾಕಿ ಹೊಡೆದು ಸಂಭ್ರಮಿಸಿ ಎಂದು ಸ್ವತಃ ಕರೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಪಟಾಕಿ ಬ್ಯಾನ್ ಇಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಚೀನಾದ ಪಟಾಕಿಯನ್ನು ಸಿಡಿಸಬೇಡಿ. ನಾವು ಎಂದಿಗೂ ಸಂತೋಷವನ್ನು ನಿರ್ಬಂಧಿಸಲಾಗದು. ಭಗವಾನ್ ಶ್ರೀ ರಾಮ ಅಯೋಧ್ಯೆಗೆ ಮರಳಿದ್ದಾನೆ. ಹಾಗಾಗಿ ಲಘು ಪಟಾಕಿ ಸಿಡಿಸಿ ಮತ್ತು ಈ ವರ್ಷದ ದೀಪಾವಳಿಯನ್ನು ಆಡಂಭರದಿಂದ ಆಚರಿಸಿ ಎಂದು ಅವರು ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.

ಎಲ್ಲ ರಾಜ್ಯಗಳು ಪಟಾಕಿ ನಿರ್ಬಂಧದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ. ಆದರೆ ಮಧ್ಯಪ್ರದೇಶದಲ್ಲಿ ಇನ್ನೂ ಏಕೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಜನಸಾಮಾನ್ಯರೊಬ್ಬರು ಟ್ವಿಟ್ಟರ್ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿರುವ ಚೌಹಾಣ್, ಪಟಾಕಿಗೆ ನಿರ್ಬಂಧವಿಲ್ಲ ಎನ್ನುವುದನ್ನು ಸ್ಪಷ್ಟೀಕರಿಸಿದ್ದಾರೆ. ಈ ಮೂಲಕ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮಾತ್ರ ವಾಯುಮಾಲಿನ್ಯದ ಬಗ್ಗೆ ಮಾತನಾಡುವವರ ಬಾಯಿ ಮುಚ್ಚಿಸಿದ್ದಾರೆ.
https://twitter.com/ChouhanShivraj/status/1325806825887813635