Connect with us

  KARNATAKA

  ರಾಷ್ಟ್ರೀಯ ನಾಯಕರ ತೀರ್ಮಾನಕ್ಕೂ ಬದ್ದ,ಟಿಕೆಟ್ ಕೈತಪ್ಪುವ ಸುಳಿವು ದೊರೆತ ಬಳಿಕ ಭಾವುಕರಾದ ಸಂಸದ ಕಟೀಲ್..!

  ಮಂಗಳೂರು : ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಾನು ಬದ್ದನಾಗಿದ್ದೇನೆ ಎಂದು ಸಂಸದ ನಳಿನ್ ಕಟೀಲ್ ಪ್ರತಿಕ್ರೀಯಿಸಿದ್ದು ಟಿಕೆಟ್ ಕೈತಪ್ಪುವ ಸುಳಿವು ದೊರೆತ ಬಳಿಕ ಭಾವುಕರಾದರು.

  ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದರು.

  ಬದಲಾವಣೆ ಜಗದ ನಿಯಮ ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ ಎಂದರು.

  ಪಕ್ಷದವರು ನಮ್ಮ ಬಳಿ ಗುಡಿಸು ಎಂದರೆ ಗುಡಿಸುತ್ತೇವೆ. ಒರೆಸು ಎಂದು ಹೇಳಿದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ ಎಂದು ಪಕ್ಷವು ನಿಂತ ನೀರಾಗಬಾರದು. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು.

  ಸಾಮಾಜಿಕ ಜಾಲತಾಣಗಳ ಚರ್ಚೆ ಬಗ್ಗೆ ನಾನು ಹೆಚ್ಚು ತಲೆಕಡಿಸಿಕೊಳ್ಳುವುದಿಲ್ಲ.ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ ,ನಾನು ತಳ ಮಟ್ಟದ ಕಾರ್ಯಕರ್ತನಾಗಿ ಬೆಳೆದು ಬಂದವನು ಹಿಂದುತ್ವದ ಸಿದ್ದಾಂತವನ್ನು ಪ್ರತಿಪಾದಿಸಿ ಬಂದವನು ನನಗೂ ಮೂರು ಬಾರಿ‌ ಅವಕಾಶ ನೀಡಿದ್ದಾರೆ. ಹದಿನೈದು ವರ್ಷ ಕೆಲಸ ಮಾಡಿದ್ದೇನೆ. ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ಆಗಲ್ಲ.ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು ನಿಂತು ಸ್ಪರ್ಧಿಸಿದೆ. ಬಳಿಕ ರಾಜ್ಯಾಧ್ಯಕ್ಷನೂ ಆದೆ. ಆದ್ದರಿಂದ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ,ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಾರ್ಟಿ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು. ಪಕ್ಷದ ಕೆಲಸ ಮಾಡೋದಕ್ಕೂ ಜನ ಬೇಕಲ್ಲ. ಈ ಬಗ್ಗೆ ಯೋಚನೆ ಮಾಡಿಕೊಂಡೇ ರಾಷ್ಟ್ರೀಯ ನಾಯಕರು ಪಟ್ಟಿ ಘೋಷಣೆ ಮಾಡುತ್ತಾರೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಭಾವುಕರಾದರು.

   

   

  Share Information
  Advertisement
  Click to comment

  You must be logged in to post a comment Login

  Leave a Reply