Connect with us

LATEST NEWS

ಜಿಲ್ಲಾಡಳಿತದ ಶಾಂತಿ ಸಭೆಗೆ ಗೈರಾದ ಸಚಿವರು, ಸಂಸದರು, ಶಾಸಕರು…!!

ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕರೆದ ಶಾಂತಿ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಶಾಸಕರಾಗಲೀ ಪಾಲ್ಗೊಳ್ಳದೆ ಕೇವಲ ಕಾಲಾಟಾಚರಕ್ಕೆ ನಡೆದಿದೆ.


ಮಂಗಳೂರಿನಲ್ಲಿ ನಡೆದ ಕೋಮುಗಲಭೆಗಳ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಇಂದು ಶಾಂತಿ ಸಭೆ ನಡೆಯಿತು. ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಗೆ ವಿವಿಧ ಸಮುದಾಯಗಳ ಪ್ರತಿನಿಧಿಗಳು ಗೈರುಹಾಜರಾಗಿದ್ದರು.


ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಎಂಟು ಶಾಸಕರು ಸಭೆಯಿಂದ ದೂರ ಉಳಿದರು. ಮುಸ್ಲಿಂ ಸೆಂಟ್ರಲ್ ಕಮಿಟಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ , ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಇತರ ಪ್ರಮುಖ ಸಂಘಟನೆಗಳಿಂದ ಕೂಡ ಸಭೆಯಿಂದ ದೂರ ಉಳಿದಿದ್ದರು.


ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಉಪಸ್ಥಿತರಿದ್ದರು. ಅಧಿಕಾರಿಗಳಲ್ಲದೆ, ಕೆಲವು ರಾಜಕೀಯ ಪಕ್ಷಗಳ ಮತ್ತು ಭಜನಾ ಮಂದಿರಗಳ ಕೆಲವು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share Information
Advertisement
Click to comment

You must be logged in to post a comment Login

Leave a Reply