ನಳಿನ್ ಕುಮಾರ್ ಒಬ್ಬ ವಿಫಲ ಸಂಸದ ಕೋಮುವಾದದ ಮೂಲಕ ಬೆಂಕಿ ಹಚ್ಚುವುದಷ್ಟೇ ಅವರಿಗೆ ಗೊತ್ತು – ದಿನೇಶ್ ಗುಂಡೂರಾವ್

ಮಂಗಳೂರು ಎಪ್ರಿಲ್ 2: ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಒಬ್ಬ ವಿಫಲ ಸಂಸದನಾಗಿದ್ದು ಕೋಮುವಾದದ ಮೂಲಕ ಬೆಂಕಿ ಹಚ್ಚುವುದಷ್ಟೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಧಾನಿ‌ ನರೇಂದ್ರ ಮೋದಿಯವರ ಆಡಳಿತದಲ್ಲಿ ದೊಡ್ಡ ಲೂಟಿಕೋರರಿಗೆ ರಕ್ಷಣೆ ದೊರೆಯುತ್ತಿದೆ. ಮೋದಿ ರಾಜ್ ಮಾಫಿಯಾ ರಾಜ್ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಬಾಂಡ್ ಮೂಲಕ ಹಣ ಸಂಗ್ರಹಣೆ ಮಾಡಿರುವ ಬಿಜೆಪಿ ಸುಮಾರು ಸಾವಿರ ಕೋಟಿಗೂ ಅಧಿಕ ಹಣ ಪಡೆದಿದೆ ಎಂದು ಆರೋಪಿಸಿದ ಅವರು ದಾವೂದ್ ಇಬ್ರಾಹಿಂ ಹಣ ನೀಡಿದರೂ ಕೂಡ ಬಿಜೆಪಿಯವರು ಸ್ವೀಕರಿಸಲಿದ್ದಾರೆ ಎಂದು ಹೇಳಿದರು.