Connect with us

LATEST NEWS

ಕೊರೊನಾ ಗೆದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮಂಗಳೂರು ಸೆಪ್ಟೆಂಬರ್ 7: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿದ್ದಾರೆ.


ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.


ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ ಎಂದಿದ್ದಾರೆ.

ನಳಿನ್‌‌ ಕುಮಾರ್‌ ಕಟೀಲ್‌ ಅವರಿಗೆ ಆಗಸ್ಟ್‌ 30ರಂದು ಕೊರೊನಾ ಪಾಸಿಟಿವ್‌ ದೃಢಪಟ್ಟಿತ್ತು. ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಟ್ವೀಟ್‌ ಮೂಲಕ ತಿಳಿಸಿದ್ದರು.

Facebook Comments

comments