LATEST NEWS
ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ನಳಿನ್

ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ನಳಿನ್
ಪುತ್ತೂರು ಮೇ 20: ನಿನ್ನೆ ರಾತ್ರಿ ವಿಟ್ಲದಲ್ಲಿ ನಡೆದ ಘರ್ಷಣೆಯಲ್ಲಿ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ನಿನ್ನೆ ವಿಟ್ಲದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಹಿಂದೂ ವಿರೋಧ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಸ್ಥಳದಲ್ಲಿದ್ದ ಸ್ಥಳೀಯ ಯುವಕರ ನಡುವೆ ಘರ್ಷಣೆ ಉಂಟಾಗಿತ್ತು. ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿ ಯುವಕರನ್ನು ಚದುರಿಸಿದ್ದರು. ಈ ಗಲಾಟೆಯಲ್ಲಿ ಕೆಲ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆಗಳಾಗಿದ್ದು ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಸಂಜೀವ ಮಠಂದೂರು ಆದರ್ಶ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.