ಇಸ್ರೇಲ್ ನಲ್ಲಿ ಕರಾವಳಿಯ ಐದು ಸಾವಿರಕ್ಕೂ ಅಧಿಕ ಮಂದಿ ಇದ್ದು,ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರು:ಇಸ್ರೇಲ್ ನಲ್ಲಿ ಕರಾವಳಿಯ ಐದು ಸಾವಿರಕ್ಕೂ ಅಧಿಕ ಮಂದಿ ಇದ್ದು,ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಸ್ರೇಲ್ ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ.
ಈಗಾಗಲೇ ಸಚಿವ ಮುರಳೀಧರನ್ ಅವರಿಗೂ ಮಾತನಾಡಿದ್ದೇನೆ.ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ.
ಈಗಲೂ ಇಸ್ರೇಲ್ ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ.
ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇಂತದ್ದೇ ಪರಿಸ್ಥಿತಿ ಇತ್ತು.ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು.
ಈಗಲೂ ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡೋ ಅಗತ್ಯ ಇಲ್ಲ,ಏನೇ ಆತಂಕ ಇದ್ರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದಿದ್ದಾರೆ.





