KARNATAKA
ಬಿಜೆಪಿ ರಾಜ್ಯಾದ್ಯಕ್ಷರಾಗಿ ಸಂಸದ ನಳಿನ್ ಕುಮಾರ ಕಟೀಲ್ ನೇಮಕ ಮಂಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಬಿಜೆಪಿ ರಾಜ್ಯಾದ್ಯಕ್ಷರಾಗಿ ಸಂಸದ ನಳಿನ್ ಕುಮಾರ ಕಟೀಲ್ ನೇಮಕ ಮಂಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಮಂಗಳೂರು ಅಗಸ್ಟ್ 20: ಬಿಜೆಪಿಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಿಸಲಾಗಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ದೇಶನದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯ ನಳಿನ್ ಕುಮಾರ್ ಕಟೀಲ್ 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. 2009 ರಲ್ಲಿ ಮೊದಲ ಬಾರಿಗೆ ಕಾಂಗ್ರೇಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾದರು. ಆ ಬಳಿಕ 2014 ಮತ್ತು 2019 ರಲ್ಲಿಯೂ ನಿರಂತರವಾಗಿ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.
ಬಿಜೆಪಿಯ ಸಿದ್ದಾಂತದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ , ಈ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಯಡಿಯೂರಪ್ಪ ಅವರಿಂದ ಹಿಂಪಡೆದಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಲಾಗಿದೆ.
ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.