Connect with us

    LATEST NEWS

    ಲೋಕಸಭೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಿದ ಸಂಸದ ನಳಿನ್ ಕುಮಾರ್ ಕಟೀಲ್

    ಲೋಕಸಭೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಿದ ಸಂಸದ ನಳಿನ್ ಕುಮಾರ್ ಕಟೀಲ್

    ನವದೆಹಲಿ ಜೂನ್ 2 : ಇಂದು ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು.

    ಮಂಗಳೂರು ವಿಮಾನ ನಿಲ್ದಾಣದಲ್ಲಿ ದಿನಾಂಕ 30-6-2019 ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗಡೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

    ವಿಮಾನ ಇನ್ನೂ 20 ಅಡಿ ಮುಂದಕ್ಕೆ ಚಲಿಸಿದ್ದರೆ, ಈ ಹಿಂದೆ 2010ರ ಮೇ 22ರಂದು ದುಬೈ ನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಕಿರಿದಾದ ರನ್- ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು ವಿಮಾನದಲ್ಲಿದ್ದ 158 ಪ್ರಯಾಣಿಕರು ಮೃತಪಟ್ಟಿದ್ದರು. ಇದಲ್ಲದೆ ಇದೇ ರೀತಿ 1981 ಆಗಸ್ಟ್ 19ರಂದು ಇಂಡಿಯನ್ ಏರ್ ಲೈನ್ಸ್ ವಿಮಾನವು ರನ್-ವೇಯಿಂದ ಜಾರಿ ಕಂದಕದ ಸಮೀಪ ನಿಂತಿತ್ತು. ಈ ಎಲ್ಲಾ ದುರ್ಘಟನೆಗಳಿಗೆ ಮಂಗಳೂರು ವಿಮಾನ ನಿಲ್ದಾಣದ ಕಿರಿದಾದ ರನ್ ವೇ ಕಾರಣವಾಗಿರುತ್ತದೆ.

    ಈ ಕೂಡಲೇ ಕೇಂದ್ರ ಸರಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply