Connect with us

    LATEST NEWS

    ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ರಾಜ್ಯಾಧ್ಯಕ್ಷ ಪಟ್ಟ..?

    ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ರಾಜ್ಯಾಧ್ಯಕ್ಷ ಪಟ್ಟ..?

    ಮಂಗಳೂರು, ನವೆಂಬರ್ 16 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಹುತೇಕ ಖಚಿತವಾಗಿದೆ.

    ಈ ಬಗ್ಗೆ ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಉನ್ನತ ಮೂಲಗಳು ಈ ಮಾಹಿತಿಯನ್ನು ಖಚಿತ ಪಡಿಸಿವೆ. ನಿನ್ನೆ ಆರ್ ಎಸ್ ಎಸ್ ಬೈಠಕ್ ನಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾ಼ಷ್ಟ್ರಧ್ಯಕ್ಷ ಅಮಿತ್ ಷಾ ಅವರು ನಗರದ ಓಷಿಯನ್ ಪರ್ಲ್ ನಲ್ಲಿ ನಡೆದ ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು, ಎಲ್ಲರೂ ನಳಿನ್ ಕುಮಾರ್ ಅವರಿಗೆ ರಾಜ್ಯದ ಅಧ್ಯಕ್ಷರ ಪಟ್ಟ ನೀಡಲು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

    ಸಭೆಯಲ್ಲಿ ಬಿಜಿಪಿ ಕಾರ್ಯದರ್ಶಿ ಸಂತೋಷ್ ಜೀ ಅವರೂ ಕೂಡ ಭಾಗವಹಿಸಿದ್ದು ನಳಿನ್ ಅಧ್ಯಕ್ಷರಾಗುವುದಕ್ಕೆ ಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಲೋಕ ಸಭಾ ಚುನಾವಣೆಗೆ ಇನ್ನು ಕೇವಲ 6 ತಿಂಗಳು ಗಳು ಮಾತ್ರ ಬಾಕಿ ಇದ್ದು, ಮೋದಿ ಸರ್ಕಾರವನ್ನು ಕೇಂದ್ರದಲ್ಲಿ ಮತ್ತೊಮ್ಮೆ ಆಡಳಿತಕ್ಕೆ ತರಲು ಚುರುಕಾಗಿರುವ ಹಾಗೂ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಪಕ್ಷವನ್ನು ಮತ್ತೊಮ್ಮೆ ತಳಮಟ್ಟದಿಂದ ಕಟ್ಟುವ ಯುವ ನಾಯಕರ ಅವಶ್ಯಕತೆ ಇದ್ದು ನಳಿನ್ ಕುಮಾರ್ ಅವರು ಇದಕ್ಕೆ ಸೂಕ್ತ ವ್ಯಕ್ತಿ ಎಂಬ ನಿರ್ಣಯಕ್ಕೆ ಬರಲಾಗಿದೆ.

    ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಈ ಹಿಂದಿನ ವರ್ಚಸ್ಸನ್ನು ಹೊಂದಿಲ್ಲ ಮತ್ತು ಇತ್ತೀಚಿನ ಉಪ ಚುನಾವಣೆಗಳಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯ ಸೋಲನ್ನು ಕಂಡಿತ್ತು. ಯಡಿಯೂರಪ್ಪ ಅವರಿಗೂ ವಯಸ್ಸಾಗುತ್ತಿದ್ದು ರಾಜ್ಯಾಧ್ಯಂತ ಓಡಾಟ ನಡೆಸಿ ಪಕ್ಷ ಸಂಘಟನೆ ನಡೆಸಲು ತೊಡಕಾಗುತ್ತಿದೆ.

    ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇರಳದ ಉಸ್ತುವರಿಯಾಗಿ ಕೇರಳದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲ ಪ್ರಮುಖ ಪಾತ್ರ ವಹಿಸಿದ್ದರು. ಪ್ರಧಾನಿ ಮೋದಿ ಅವರಿಗೂ ನಳಿನ್ ಅವರು ಬಹಳ ನಿಕಟವರ್ತಿ ಹಾಗೂ ಆತ್ಮಿಯಾಗಿದ್ದಾರೆ ಈ ಎಲ್ಲಾ ಹಿನ್ನೆಲೆಯಲ್ಲಿ ನಳಿನ್ ಅವರೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಬಿಜೆಪಿ ವರಿಷ್ಟರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *