LATEST NEWS
ನವೆಂಬರ್ 20 ರಂದು ಶಬರಿಮಲೆಗೆ ಬಿಜೆಪಿ ಸಂಸದ ನಳಿನ್ ಕುಮಾರ್
ನವೆಂಬರ್ 20 ರಂದು ಶಬರಿಮಲೆಗೆ ಬಿಜೆಪಿ ಸಂಸದ ನಳಿನ್ ಕುಮಾರ್
ಮಂಗಳೂರು ನವೆಂಬರ್ 19: ಕೇರಳ ಸರಕಾರ ಶಬರಿಮಲೆಯಲ್ಲಿ ನಡೆಸುತ್ತಿರುವ ದೌರ್ಜನ್ಯ ಹಾಗೂ ಅಯ್ಯಪ್ಪ ಭಕ್ತಾಧಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ನವೆಂಬರ್ 20 ರಂದು ಶಬರಿಮಲೆಗೆ ತೆರಳಲಿದ್ದಾರೆ.
ವಾರ್ಷಿಕ ಮಕರವಿಳಕ್ಕು ಹಾಗೂ ಮಂಡಲ ಪೂಜೆ ನಿಮಿತ್ತ ಎರಡು ತಿಂಗಳ ದರ್ಶನಕ್ಕಾಗಿ ಶುಕ್ರವಾರ ಸಂಜೆಯಿಂದ ದೇವಸ್ಥಾನದ ಬಾಗಿಲು ತೆರೆದಿದ್ದು, ಶನಿವಾರ ದರ್ಶನ ಆರಂಭವಾಗಿದೆ. ಭಾನುವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನೂರಾರು ಭಕ್ತರು ದರ್ಶನ ಪಡೆಯುತ್ತಿದ್ದು, ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.
ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ ಶಬರಿಮಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಹೇರಿದ್ದು, ರಾತ್ರಿ ವೇಳೆ ಸನ್ನಿಧಾನದಲ್ಲಿ ಯಾರೂ ತಂಗುವಂತಿಲ್ಲ ಎಂದು ಆದೇಶಿಸಿ, ಭಕ್ತರನ್ನು ಬಂಧಿಸಿದ್ದರು.
ಈ ಹಿನ್ನಲೆಯಲ್ಲಿ ಶಬರಿಮಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಹಾಗೂ ಅಲ್ಲಿ ಭಕ್ತರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ವರದಿ ತಯಾರಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ವಿ. ಮುರಳೀಧರನ್ ಅವರು ನವೆಂಬರ್ 20 ರಂದು ಶಬರಿಮಲೆಗೆ ತೆರಳಲಿದ್ದಾರೆ.
ನವೆಂಬರ್ 20 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ. ಅಲ್ಲದೆ ಶಬರಿಮಲೆ ಅಯ್ಯಪ್ಪ ದೇವರ ದರ್ಶನವನ್ನು ಪಡೆಯಲಿದ್ದಾರೆ.
ನಳಿನ್ ಕುಮಾರ್ ಕಟೀಲ್ ಹಾಗೂ ವಿ . ಮುರಳೀದರ್ ಶಬರಿಮಲೆಯಲ್ಲಿ ಅಧ್ಯಯನ ನಡೆಸಿ ತಯಾರಿಸಿದ ವರದಿಯನ್ನು ಕೇಂದ್ರ ಬಿಜೆಪಿ ನಾಯಕರುಗಳಿಗೆ ಸಲ್ಲಿಸಲಿದ್ದಾರೆ.
ಈ ನಡುವೆ ಈಗಾಗಲೇ ಬಿಜೆಪಿ ಮುಖಂಡ ಸುರೇಂದ್ರನ್ ಶಬರಿಮಲೆ ತೆರಳುವ ಸಂದರ್ಭದಲ್ಲಿ ಪೊಲೀಸರು ಬಂಧಿಸಿ, ಶಬರಿಮಲೆಗೆ ತೆರಳದಂತೆ ತಡೆಯೊಡ್ಡಿದ್ದಾರೆ. ಈಗ ಮತ್ತೆ ಬಿಜೆಪಿ ಸಂಸದರು ಶಬರಿಮಲೆಗೆ ತೆರಳುತ್ತಿರುವುದು ಕೇರಳ ಸರಕಾರ ಹೇಗೆ ನಡೆದುಕೊಳ್ಳುತ್ತದೆ ಎನ್ನುವುದು ಕಾದು ನೋಡಬೇಕಿದೆ.
#SaveSabarimala On Nov 20 , BJP MPs @VMBJP & @nalinkateel will visit Nilackal , Pampa , Sannidhanam . MPs will have darshana & study the situation at all 3 places & hardships faced by Ayyappa devotees & submit firsthand report to National leadership .. @BJP4India @BJP4Karnataka
— B L Santhosh (@blsanthosh) November 19, 2018