Connect with us

LATEST NEWS

ಸಂಸದ ನಳಿನ್ ಕುಮಾರ್ ಕಟೀಲ್ ಸಹೋದರ ವಿಧಿವಶ

ಮಂಗಳೂರು ಜೂನ್ 28: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ.


ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾಗಿರುವ ನವೀನ್​ ಕುಮಾರ್​, ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿಯವರನ್ನು ಅಗಲಿದ್ದಾರೆ. ನವೀನ್ ಕುಮಾರ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.