ಮತ-ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಲು ಹೋರಟ ಸಂಸದ ನಳಿನ್ ಕುಮಾರ್ – ಜೆ.ಆರ್ ಲೋಬೋ

ಮಂಗಳೂರು ಫೆಬ್ರವರಿ 19: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಳಿನ್ ಕುಮಾರ್ ಕಟೀಲ್ ತಮ್ಮ ವೈಫಲ್ಯ ಮರೆಮಾಚಲು ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತಲು ನೋಡುತ್ತಿದ್ದಾರೆ ಎಂದು ಮಾಜಿ ಶಾಸಕ ಜೆ.ಆರ್ ಲೋಬೋ ಕಿಡಿಕಾರಿದ್ದಾರೆ.

ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸದ ನಳಿನ್ ಕುಮಾರ್ ಕಟೀಲ್ ಕಳೆದ 10 ವರ್ಷದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದರು.

ಪಂಪ್ ವೆಲ್ ಮತ್ತು ಉಳ್ಳಾಲ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಸಚಿವ ಯು.ಟಿ. ಖಾದರ್ ಮತ್ತು ಮಾಜಿ ಶಾಸಕ ಜೆ.ಆರ್.ಲೋಬೊ ಅವರ ಸ್ವಸಮುದಾಯದ ಮೇಲಿನ ಪ್ರೀತಿಯೇ ಕಾರಣ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮಾಡಿರುವ ಆರೋಪಕ್ಕೆ ತೀಕ್ಷವಾಗಿ ಪ್ರತಿಕ್ರಿಯಿಸಿದರು.

ನಿಮ್ಮ ವೈಫಲ್ಯಕ್ಕೆ ನಮ್ಮ ಕಾಲೆಳೆಯಲು ಬರಬೇಡಿ ಎಂದು ಹೇಳಿದ ಅವರು ನಳಿನ್ ಕುಮಾರ್ ಕಟೀಲ್ ತಮ್ಮ ವೈಫಲ್ಯಗಳನ್ನು ಮರೆಮಾಚಲು ಮತ್ತು ಮುಂದಿನ ಚುನಾವಣೆಯ ದೃಷ್ಟಿಕೋನದಿಂದ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತಲು ನೋಡುತ್ತಿದ್ದಾರೆ ಎಂದು ಹೇಳಿದರು.

ನೇರ ರಾಜಕೀಯ ಮಾಡುವ ಬದಲು ಮತ-ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ ಅವರು  ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾಗಿ ಜಿಲ್ಲೆಗೆ ನಳಿನ್ ಕೊಡುಗೆ ಶೂನ್ಯ.

ಹೊಸ ಯೋಜನೆ ತರುವುದು ಬಿಡಿ ಹಳೆಯ ಯೋಜನೆಗಳಿಗೆ ಪುನರುಜ್ಜೀವನ ನೀಡಲೂ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

VIDEO

Facebook Comments

comments