Connect with us

LATEST NEWS

‘ಯಾರಿಗೂ ಹೆಳ್ಬೇಡಿ’ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ – ನಳಿನ್ ಕುಮಾರ್ ಕಟೀಲ್

ಮಂಗಳೂರು ಜುಲೈ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ಆಡಿಯೋ ಗೂ ನನಗೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.,


ಮಂಗಳೂರಿನಲ್ಲಿ ಮಾತನಾಡಿ ಅವರು ನಾಯಕತ್ಪದ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ, ನಮ್ಮ ಪಾರ್ಟಿಗೆ ಯಡಿಯೂರಪ್ಪ ಆತ್ಮ, ಅವರೇ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ. ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆದು ತನಿಖೆಗೆ ಆಗ್ರಹಿಸುತ್ತೇನೆ ಎಂದು ಸಂಸದ, ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನಿಡುತ್ತೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದವರು ತಿಳಿಸಿದ್ದಾರೆ.

 

ನಿನ್ನೆ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಸಂಸದ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ತುಳುವಿನಲ್ಲಿರುವ ಸಂಭಾಷಣೆ ಆಡಿಯೋ ವೈರಲ್ ಆಗಿತ್ತು.
ಆಡಿಯೊ ಸಂಭಾಷಣೆ
ನಳಿನ್: ಯಾರಿಗೂ ಹೇಳಲು ಹೋ ಗಬೇಡಿ.
ಈಶ್ವರಪ್ಪ, ಜಗದೀಶ ಶೆಟ್ಟರ್…. ಆ ತಂಡವನ್ನೇ ತೆಗೆಯುತ್ತೇವೆ.
ಎಲ್ಲಹೊ ಸ ತಂಡ ಮಾಡುತ್ತಿದ್ದೇವೆ. ಹೇಳಲು ಹೋ ಗಬೇಡಿ. ಈಗ ಸದ್ಯಕ್ಕೆ ಯಾರಿಗೂ ಕೊಡಬೇಡಿ ಅಂದಿದ್ದಾರೆ…
(ನಗು)..
ಇಲ್ಲ. ಯಾರಿಗೂ ಹೇಳಬೇಡಿ. ಬೇಡ. ಹೂಂ… ಏನೂ ತೊಂ ದರೆ ಇಲ್ಲ.
ಯಾರಿಗೂ ಹೆದರಬೇಡಿ. ಯಾರಾದರೂ ಸರಿ ಇನ್ನು ನಮ್ಮ ಕೈಯಲ್ಲೇ ಎಲ್ಲ. ಮೂರು ಹೆಸರುಗಳು ಇವೆ. ಅದರಲ್ಲಿಯಾವುದಾದರೂ
ಆಗುವ ಸಾಧ್ಯತೆಗಳಿವೆ.
ಇಲ್ಲ.. ಇಲ್ಲ. ಇಲ್ಲಿಂದ ಯಾರನ್ನೂ ಮಾಡುವುದಿಲ್ಲ. ದೆಹಲಿಯಿಂದಲೇ ಹಾಕುತ್ತಾರೆ..

Share Information
Continue Reading
Advertisement
Click to comment

Leave a Reply

Your email address will not be published. Required fields are marked *