ಗೋ ಕಳ್ಳತನ ವಿರುದ್ದ ಕಠಿಣ ಕಾನೂನು ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹ

ಮಂಗಳೂರು ಜೂನ್ 26: ಗೋವುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟ ನಡೆಸುವ ಮೂಲಕ ಮತಾಂಧ ಶಕ್ತಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಷಡ್ಯಂತ್ರ ನಡೆಸಿವೆ.

ಪೊಲೀಸ್ ಇಲಾಖೆ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸದ ನಳಿನ್‍ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.

ಮಾರಕಾಯುಧ ಬಳಸಿ ಹಟ್ಟಿಯಿಂದ ಗೋವುಗಳನ್ನು ಕಳ್ಳತನ ಮಾಡುವ ಪ್ರಕರಣ ಪ್ರತಿದಿನ ನಡೆಯುತ್ತಿದೆ. ಇದರಿಂದ ಹೈನುಗಾರರು, ರೈತರು ಆತಂಕದಿಂದ ಬದುಕು ಸ್ಥಿತಿ ನಿರ್ಮಾಣವಾಗಿದೆ.

ಹಟ್ಟಿಯಿಂದ, ಗೋ ಶಾಲೆಗಳಿಂದ ಗೋವುಗಳನ್ನು ಕದಿಯುತ್ತಿದ್ದರೂ ಸರ್ಕಾರ ಮೌನ ವಹಿಸಿದೆ. ಗೋವುಗಳನ್ನು ಕದ್ದು ಹತ್ಯೆ ಮಾಡುತ್ತಿರುವುದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments

comments