Connect with us

  KARNATAKA

  ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಮಾನನಷ್ಟ ಕೇಸು ದಾಖಲಿಸಿದ ಸಂಸದ ಪ್ರತಾಪ್‌ ಸಿಂಹ..!

  ಬೆಂಗಳೂರು: ಅವಾಚ್ಯ ಶಬ್ದಗಳನ್ನು ಬಳಸಿ ತನ್ನ ವಿರುದ್ದ ಟೀಕೆ ಮಾಡಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಮಾನನಷ್ಟ ಕೇಸು ದಾಖಲಿಸಿದ್ದಾರೆ.

  ಕಳೆದ ತಿಂಗಳು ಚಿಕ್ಕಬಳ್ಳಾಪುರದಲ್ಲಿ ನಡೆದ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.
  ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದರು.

  ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್‌ ನನ್ನ ವಿರುದ್ಧ ಮಾಧ್ಯಮಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಮುಠ್ಠಾಳ, ಅಯೋಗ್ಯ ಎಂಬಿತ್ಯಾದಿ ನಿಂದನತ್ಮಾಕ ಶಬ್ದಗಳಿಂದ ತೇಜೋವಧ ಮಾಡಲು ಪ್ರಯತ್ನಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಜನರಿಗೆ ನನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಲು ದಾರಿಮಾಡಿಕೊಟ್ಟಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಕನಿಷ್ಠ ಸೌಜನ್ಯವನ್ನು ಕೂಡ ತೋರದ ಚಾರಿತ್ರ್ಯ ವಧೆ ಮಾಡುವ ಮಾತುಗಳನ್ನು ಆಡಿದ್ದಾರೆ ಹಾಗೂ ನನ್ನನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ನ್ಯಾನಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply