KARNATAKA
ರಾಜ್ಯ ಬಿಜೆಪಿ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ ಸಂಸದ ಪ್ರತಾಪ್ ಸಿಂಹ….!!

ಬೆಂಗಳೂರು ಫೆಬ್ರವರಿ 21: ನಮ್ಮದೇ ಸರಕಾರ ಬಂದ ಮೇಲೂ ಹಿಂದೂ ಕಾರ್ಯಕರ್ತರ ಕೊಲೆ ನಡೆಯುತ್ತಿರುವುದು ನಾಚಿಕೇಗೇಡು ಎಂದು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ಕಾಂಗ್ರೆಸ್ ನ್ನು ನಿಂದಿಸುತ್ತಿದ್ದೆವು. ಈಗ ನಮ್ಮ ಸರ್ಕಾರ ಇದ್ದರೂ ನಮ್ಮದೇ ಕಾರ್ಯಕರ್ತ ಹತ್ಯೆ ಆಗಿದ್ದಾನೆ. ಇದು ನನಗೆ ತೀವ್ರ ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹಿಜಬ್ ವಿಷಯದಲ್ಲಿ ಹೈಕೋರ್ಟ್ ನ ಮಧ್ಯಂತರ ಆದೇಶ ಪಾಲನೆ ಆಗುತ್ತಿಲ್ಲ. ಸೆಕ್ಷನ್ 144 ನ್ನು ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಂಡಿಲ್ಲ. ಈಗ ನಮ್ಮ ಹಿಂದೂ ಕಾರ್ಯಕರ್ತ ಹತ್ಯೆಯಾಗಿದ್ದಾನೆ ಸರ್ಕಾರ ಇನ್ನು ಯಾವಾಗ ಕ್ರಮ ಕೈಗೊಳ್ಳಲಿದೆ? ಎಂದು ಪ್ರಶ್ನಿಸಿದ್ದಾರೆ. ಸಿಎಂ ಮಾತು ನಿಲ್ಲಿಸಿ ಕೃತಿಯಲ್ಲಿ ಕಠಿಣತೆ ತೋರಲಿ ಎಂದು ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ಹೈದರಾಬಾದ್ ನಲ್ಲಿ ಅತ್ಯಾಚಾರ ಆದಾಗ ಅಪರಾಧಿಗಳನ್ನು ಗುಂಡಿಕ್ಕಿ ಕೊಂದರು. ಅದೇ ರೀತಿ ಇಲ್ಲೂ ಕ್ರಮ ಕೈಗೊಂಡ್ರೆ ಪಾಠ ಕಲಿಯುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.
ಈಗ ನಮ್ಮ ಕಾರ್ಯಕರ್ತ ಹತ್ಯೆ ಆಗಿದ್ದಾನೆ.ಇನ್ಯಾವಾಗ ಕ್ರಮ ಕೈಗೊಳ್ಳೋದು ಸರ್ಕಾರ?ಡಿಜೆ ಹಳ್ಳಿ ಕೆ ಜಿ ಹಳ್ಳಿ ಗಲಾಟೆ ಆದಾಗಲೇ ಎಸ್ಡಿಪಿಐ, ಪಿಎಫ್ಐ ಮೇಲೆ ಕ್ರಮ ಆಗಬೇಕಿತ್ತು, ಬ್ಯಾನ್ ಮಾಡಬೇಕಿತ್ತು.ಆಗಲೇ ಕ್ರಮ ಆಗಿದ್ದಿದ್ರೆ ಹರ್ಷ ಸಾಯ್ತಿರಲಿಲ್ಲ.ಕಠಿಣ ಕ್ರಮ, ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೇಪರ್ ಸ್ಟೇಟ್ಮೆಂಟ್ ಕೊಟ್ಟರೆ ಪ್ರಯೋಜನ ಇಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಸಂಸದರು ವ್ಯಕ್ತಪಡಿಸಿದರು.