KARNATAKA
ಸೋಲಿನ ಬೆನ್ನಲ್ಲೆ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ರಾಜಕೀಯ ನಿವೃತ್ತಿ…!!
ದಾವಣಗೆರೆ ಮೇ 14: ಹೀನಾಯ ಸೋಲನ ಬಳಿಕ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಕಾರ್ಯಕರ್ತಕೊಂದಿಗೆ ಮಾತನಾಡುವ ಸಂದರ್ಭ ಭಾವುಕರಾದ ರೇಣುಕಾಚಾರ್ಯ ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕೊವಿಡ್ ವೇಳೆ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ಬೆಂಬಲಿಗರ ಮುಂದೆ ಕಣ್ಣೀರಿಟ್ಟರು. ಅಲ್ಲದೇ ಪಕ್ಷ ಯಾರಿಗೆ ಟಿಕೇಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಕ್ಷೇತ್ರದ ಜನರಿಗೆ ಹಗಲಿರುಳು ಕೆಲಸ ಮಾಡಿದೆ. ಆದರೂ ಈ ರೀತಿ ಸೋಲು ಆಯ್ತು ಎಂದು ಸೋಲಿನ ಆಘಾತದಿಂದ ತಮ್ಮ ಕ್ಷೇತ್ರದ ಅಭಿಮಾನಿಗಳ ಎದುರು ಮಾತನಾಡಲು ಆಗದೆ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ. ತಾಲೂಕಿನ ಎಲ್ಲಾ ನಾಯಕರು ನನ್ನ ಪರ ಕೆಲಸ ಮಾಡಿದ್ದರು. ನನಗೆ ಮತ ಕೊಟ್ಟವರಿಗೂ, ಕೊಡದವರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಸೋಲಿನ ಬಳಿಕವೂ ನೀವು ನನ್ನ ಮನೆಗೆ ಬಂದಿದ್ದೀರಿ. ಕೋವಿಡ್ನಲ್ಲಿ ಕೆಲಸ ಮಾಡಿದ್ದೆ, ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿದ್ದೆ. ಆದರೆ ಈಗ ಸೋತ ಬಳಿಕ ನಾನು ಯಾರ ಬಗ್ಗೆಯೂ ಆರೋಪ ಮಾಡಲ್ಲ, ನನ್ನ ಸೋಲಿಗೆ ನಾನೇ ಕಾರಣ ಅಂತ ಭಾವಿಸುತ್ತೇನೆ. ಮತದಾರರಿಗೆ ನನ್ನ ಮೇಲೆ ನಂಬಿಕೆ ಇರಲಿಲ್ಲ ಅನ್ಸುತ್ತೆ. ನಾನು ಗೆದ್ದರೂ ಧ್ವೇಷ ರಾಜಕಾರಣ ಮಾಡಿರಲಿಲ್ಲ ಎಂದು ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ.