Connect with us

    LATEST NEWS

    ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಸಂಸದ ಹೃದಯಾಘಾತದಿಂದ ನಿಧನ

    ದೆಹಲಿ ಜನವರಿ 14: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಜಲಂಧರ್ ಸಂಸದ ಸುಂಖೋತ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ.


    ಪಂಜಾಬ್​ನ ಲೂದಿಯಾನದಲ್ಲಿ ನಡೆಯುತ್ತಿದ್ದ ಯಾತ್ರೆ ವೇಳೆ ಘಟನೆ ನಡೆದಿದ್ದು ಜಲಂಧರ್ ಜಿಲ್ಲೆಯ ಫಿಲ್ಲೌರ್ ಪ್ರದೇಶದ ಮೂಲಕ ಯಾತ್ರೆ ಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಸಂಸದ ಸಂತೋಖ್ ಸಿಂಗ್ ರಾಹುಲ್ ಗಾಂಧಿ ಅವರೊಂದಿಗೆ ಕುಶ್ತ್ ಆಶ್ರಮದಿಂದ ಹೊರಬಂದಾಗ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಭಾರತ್ ಜೋಡೋ ಯಾತ್ರೆ ಸದ್ಯ ಸ್ಥಗಿತಗೊಂಡಿದೆ.

    ಫಿಲೌರ್ ವಿಧಾನಸಭಾ ಕ್ಷೇತ್ರವನ್ನು ಸಂತೋಖ್ ಸಿಂಗ್ ಚೌಧರಿ ಅವರ ಪುತ್ರ ವಿಕ್ರಮಜಿತ್ ಚೌಧರಿ ಪ್ರತಿನಿಧಿಸುತ್ತಿದ್ದಾರೆ. 2014 ಮತ್ತು 2019ರಲ್ಲಿ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂತೋಷ್ ಸಿಂಗ್ ಗೆದ್ದಿದ್ದರು.

     

    Share Information
    Advertisement
    Click to comment

    You must be logged in to post a comment Login

    Leave a Reply