ಜಿಲ್ಲೆಯ ಎಲ್ಲಾ ಅಹಿತಕರ ಘಟನೆಗೆ ಸಚಿವ ಯು.ಟಿ ಖಾದರ್ ಕಾರಣ – ಸಂಸದೆ ಶೋಭಾ ಕಂದ್ಲಾಜೆ

ಮಂಗಳೂರು ಜೂನ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಅಹಿತಕರ ಘಟನೆಗಳಿಗೆ ಉಸ್ತುವಾರಿ ಸಚಿವ ಯು.ಟಿ ಖಾದರ್ ಕಾರಣ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದ, ಜಿಲ್ಲೆಯಲ್ಲಿ ಪೊಲೀಸರ ಮೇಲೆ ಭಯ ಇಲ್ಲದಂತಾಗಿದೆ. ನಿನ್ನೆ ಹಗಲೇ ಹುಡುಗಿ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಯುವಕ ತಾನು ಕೂಡ ಆತ್ಮಹತ್ಯೆ ಯತ್ನಿಸಿದ್ದು ಈ ರೀತಿಯ ಘಟನೆಗಳಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಪಡಿಸಬೇಕಾದ ಅಗತ್ಯತೆ ಇದೆ ಎಂದು ಅಭಿಪ್ರಾಯಪಟ್ಟರು

ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಅಹಿತಕರ ಘಟನೆಗೆ ಉಸ್ತುವಾರಿ ಸಚಿವ ಯು.ಟಿ ಖಾದರ್ ಕಾರಣ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ಯು. ಟಿ ಖಾದರ್ ಅವರ ಕುಮ್ಮಕ್ಕಿನಂತೆ ಅಕ್ರಮ ಗೋಸಾಗಾಣಿಕೆ ನಡೆಯುತ್ತಿದ್ದು, ಅಕ್ರಮ ಗೋಸಾಗಾಟಗಾರರನ್ನು ಸಚಿವ ಯು.ಟಿ ಖಾದರ್ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಅಕ್ರಮ ಕಸಾಯಿಖಾನೆಗಳಿಗೆ ಖಾದರ್ ಅವರ ಅಭಯಹಸ್ತವಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನಿಯೋಗ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋಕಳ್ಳತನ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

Facebook Comments

comments