KARNATAKA
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಗ್ಯಾಸ್ ಸಿಲಿಂಡರ್ ನಿಂದ ಅಲ್ಲ – ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು ಮಾರ್ಚ್ 01: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಗ್ಯಾಸ್ ಸಿಲಿಂಡರ್ ಅಲ್ಲ ಎಂದು ಸಂಸದ ಬೆಂಗಳೂರು ದಕ್ಷಿಣ ಕೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್‌ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಚ್‌ಎಎಲ್ ಬಳಿಯ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರಬಹುದು ಎಂಬ ಅನುಮಾನವನ್ನು ಬೆಂಗಳೂರು ದಕ್ಷಿಣ ಕೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ನಾನು ರಾಮೇಶ್ವರಂ ಕೆಫೆ ಸಂಸ್ಥಾಪಕ ನಾಗರಾಜ್ ಅವರೊಂದಿಗೆ ರೆಸ್ಟೋರೆಂಟ್‌ನಲ್ಲಿ ನಡೆದ ಸ್ಫೋಟದ ಬಗ್ಗೆ ಮಾತನಾಡಿದೆ. ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿದೆ ಮತ್ತು ಯಾವುದೇ ಸಿಲಿಂಡರ್ ಸ್ಫೋಟಗೊಂಡಿಲ್ಲ ಎಂದು ಅವರು ನನಗೆ ಮಾಹಿತಿ ನೀಡಿದರು ಎಂದು ಹೇಳಿದ್ದಾರೆ.