KARNATAKA
ಪ್ರವಾಹದಲ್ಲಿ ಬೆಂಗಳೂರು – ಟೆಂಪ್ಟ್ ಆಗಿ ದೋಸೆ ತಿನ್ನಲು ಹೋದೆ ಎಂದ ಸಂಸದ ತೇಜಸ್ವಿ ಸೂರ್ಯಗೆ ತರಾಟೆ

ಬೆಂಗಳೂರು : ಮಳೆಯಿಂದಾಗಿ ಬೆಂಗಳೂರು ಅರ್ಧ ಮುಳುಗಿ ಜನ ಸಂಕಷ್ಟದಲ್ಲಿದ್ದಲೆ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರಿ ಟೀಕೆ ವ್ಯಕ್ತವಾಗಿದೆ.
ಭಾನುವಾರ ಸುರಿದ ಮಳೆಯಿಂದಾಗಿ ಜನ ಸಂಕಷ್ಟದಲ್ಲಿದ್ದರೆ ಸಂಸದ ತೇಜಸ್ವಿ ಸೂರ್ಯ ಅವರು ಇನ್‌ಸ್ಟಾಗ್ರಾಂನಲ್ಲಿ ದೋಸೆ ಫೋಟೊ ನೋಡಿ ಟೆಂಪ್ಟ್ ಆಗಿ ಪದ್ಮನಾಭ ನಗರದ ಹೋಟೆಲ್‌ಗೆ ಭೇಟಿ ನೀಡಿ ದೋಸೆ ತಿನ್ನುತ್ತಿದ್ದೆನೆ ಎಂದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನಡೆಯನ್ನು ಪ್ರತಿಪಕ್ಷಗಳು ಮತ್ತು ಜನರು ಟೀಕಿಸಿದ್ದಾರೆ.

ವಿಡಿಯೊದಲ್ಲಿ ತೇಜಸ್ವಿ ಸೂರ್ಯ, ‘ಪದ್ಮನಾಭ ನಗರದ ಸಾತ್ವಿ ಕಿಚನ್‌ಗೆ ಬಂದಿದ್ದೆ. ಇನ್‌ಸ್ಟಾಗ್ರಾಂನಲ್ಲಿ ದೋಸೆಯ ಫೋಟೊ ನೋಡಿ ಟೆಪ್ಟ್ ಆಗಿ ಇಲ್ಲಿಗೆ ಬಂದಿದ್ದು. ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ. ನೀವೂ ಬನ್ನಿ. ತಿಂದಾಗ್ಲೇನೆ ಆಸ್ವಾದನೆ ನಿಮಗೆ ಗೊತ್ತಾಗುವುದು. ಉಪ್ಪಿಟ್ಟು ಬಹಳ ಚೆನ್ನಾಗಿದೆ. ಬನ್ನಿ’ ಎಂದು ಜನರನ್ನು ಆಹ್ವಾನಿಸುತ್ತಿರುವುದು ಇದೆ. ಈ ವಿಡಿಯೋ ಕುರಿತಂತೆ ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಕಮೆಂಟ್ ಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Video dated 5th September.@Tejasvi_Surya was enjoying a good breakfast while Bangalore was drowning.
Has he visited even a single flood affected region? pic.twitter.com/uFnZ4Rjs1m— Lavanya Ballal (@LavanyaBallal) September 6, 2022