Connect with us

LATEST NEWS

ಬೆಂಗಳೂರು ಉಗ್ರರ ತಾಣ ಎಂದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ

ಬೆಂಗಳೂರು ಸೆಪ್ಟೆಂಬರ್ 28: ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಸಂಸದ ತೇಜಸ್ವಿ ಸೂರ್ಯ ಅವರ ಬೆಂಗಳೂರು ಉಗ್ರರ ತಾಣ ಎಂಬ ಹೇಳಿಕೆ ವಿರುದ್ದ ಈಗ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರಸ್ಥಾನವಾಗುತ್ತಿದೆ ಎಂದು ಹೇಳಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಶಾಸಕಿ ಸೌಮ್ಯ ರೆಡ್ಡಿ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಿಡಿಕಾರಿದ್ದಾರೆ.


ಈ ಕುರಿತಂತೆ ಟ್ವೀಟ್ ಮಾಡಿರುವ ಸೌಮ್ಯ ರೆಡ್ಡಿ ಸಂಸದ ತೇಜಸ್ವಿ ಅವರಿಗೆ ನಮ್ಮ ನಗರ ಅವರಿಗೆ ಎಲ್ಲವನ್ನೂ ನೀಡಿದೆ, ಅವರ ತಮ್ಮ ಅಜೆಂಡಾಕ್ಕಾಗಿ ನಮ್ಮ ನಗರದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. 1.2 ಕೋಟಿ ಜನರನ್ನು ತಪ್ಪಿತಸ್ಥರನ್ನಾಗಿ ಚಿತ್ರಿಸಿದ್ದಾರೆ. ಇಂತಹ ಅವಿವೇಕ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಶಾಸಕಿ ಸೌಮ್ಯ ರೆಡ್ಡಿ ಕಿಡಿಕಾರಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣದಲ್ಲಿ ಕೂಡ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Facebook Comments

comments