Connect with us

    LATEST NEWS

    ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್ ಸ್ವಾಮಿನಾಥನ್ ಇನ್ನಿಲ್ಲ

    ಚೆನ್ನೈ ಸೆಪ್ಟೆಂಬರ್ 28 : ದೇಶದಲ್ಲಿ ಹಸಿರು ಕ್ರಾಂತಿ ಮೂಲಕ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಚೆನ್ನೈನಲ್ಲಿ ಗುರುವಾರ ನಿಧನರಾದರು.


    1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋಧಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ.ಸುಬ್ರಮಣಿಯಂ, ಜಗಜೀವನ್ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು. ದೇಶದ ಕೃಷಿ ಕ್ಷೇತ್ರದಲ್ಲೇ ಅಲ್ಲದೆ, ಜಾಗತಿಕ ಮಟ್ಟದಲ್ಲಿ ಸ್ವಾಮಿನಾಥನ್ ಅವರ ಕಾರ್ಯ ಹೆಚ್ಚು ಜನಪ್ರಿಯ. ಜಾಗತಿಕ ಮಟ್ಟದ ಹಲವು ಕೃಷಿ ಹಾಗೂ ಪರಿಸರ ಜಾಗೃತಿ ಕುರಿತ ಕಾರ್ಯಕ್ರಮಗಳಲ್ಲಿ ಅವರು ಸಕ್ರೀಯರಾಗಿದ್ದರು. ಟೈಮ್ ನಿಯತಕಾಲಿಕೆ ಪ್ರಕಟಿಸಿದ 20ನೇ ಶತಮಾನದ 20 ಅತ್ಯಂತ ಪ್ರಭಾವಿಗಳ ಪಟ್ಟಿಯಲ್ಲಿ ಸ್ವಾಮಿನಾಥನ್ ಅವರ ಹೆಸರು ಸೇರಿತ್ತು.

    ಮಣ್ಕೊಂಬು ಸಾಂಬಸಿವನ್ ಸ್ವಾಮಿನಾಥನ್ ಅವರು 1925ರ ಆ. 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ, ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ ಅಭಿವೃದ್ಧಿ ಮೂಲಕ ದೇಶದ ಆರ್ಥಿಕತೆ ಉತ್ತಮಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *