LATEST NEWS
ಎಂಎಸ್ ಇಝೆಡ್ ಪರಿಸರದ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ…!!

ಸುರತ್ಕಲ್ ಎಪ್ರಿಲ್ 24: ಸುರತ್ಕಲ್ ನ ಎಸ್‌ಇಝಡ್‌ನಲ್ಲಿರುವ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ. ಭಾರಿ ಪ್ರಮಾಣದ ಹೊಗೆ ಪರಿಸರದಲ್ಲಿ ಹರಡಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಶಾರ್ಟ್ ಸರ್ಕ್ಯೂಟ್ ಅಥವಾ, ಸಿಲಿಂಡರ್ ಸ್ಪೋಟದಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ. ಈ ಕಂಪೆನಿಯ 4ನೇ ಪ್ಲ್ಯಾಂಟ್ ನ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭ ಇಲ್ಲಿ ವೆಲ್ಡಿಂಗ್ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಇನ್ನು ಲಾಕ್ ಡೌನ್ ಹಿನ್ನಲೆ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇದ್ದು, ಕಂಪೆನಿಯ ಸಿಬ್ಬಂದಿಗಳ ಊಟದ ಸಮಯದಲ್ಲಿ ಸ್ಪೋಟ ಸಂಭವಿಸಿದ್ದು, ಈ ಹಿನ್ನೆಲೆ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಫೋಟದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.
ಸ್ಥಳದಲ್ಲಿ ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್ಎಂಪಿಟಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿದ್ದಾರೆ.