LATEST NEWS
25 ಲಕ್ಷ ಲಂಚ ಸ್ವೀಕರಿಸಿದ ಮುಡಾ ಆಯುಕ್ತರಿಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು ಮಾರ್ಚ್ 26: 25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಟಿಡಿಆರ್‌ಗೆ ಸಂಬಂಧಿಸಿದಂತೆ ಮಾರ್ಚ್ 23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಲ್ಲಾಳಿ ಮುಹಮ್ಮದ್ ಸಲೀಂಗೂ ನ್ಯಾಯಾಂಗ 14 ದಿನಗಳ ಬಂಧನ ವಿಧಿಸಲಾಗಿದೆ.
