KARNATAKA
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು..!
ಬೆಂಗಳೂರು: ಮುಡಾ ಸೈಟ್ ಹಂಚಿಕ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಒದಗಿದೆ. ಈ ಮುಡಾ ಅಕ್ರಮ ಕೇಸ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಸಾಮಾಜಿಕ ಹೋರಾಟಗಾರ ಟಿ ಜೆ ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ರಾಜ್ಯಪಾಲರು ಇಂದು ಅಧಿಕೃತ ಆದೇಶ ಹೊರಡಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ಕಾರ್ಯದರ್ಶಿಗೆ ಪ್ರಾಸಿಕ್ಯೂಷನ್ ಪತ್ರ ರವಾನೆ ಮಾಡಿದ್ದಾರೆ. ರಾಜಭವನದಿಂದ ಮುಖ್ಯಕಾರ್ಯದರ್ಶಿಗೆ ನೋಟಿಫಿಕೇಷನ್ ಜಾರಿ ಮಾಡಲಾಗಿದೆ. ದೂರುದಾರ ಟಿ.ಜೆ.ಅಬ್ರಾಹಂಗೆ ರಾಜ್ಯಪಾಲರ ಕಚೇರಿಯಿಂದ ಕರೆ ಹೋಗಿದ್ದ ಮಧ್ಯಾಹ್ನ 3ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.