Connect with us

LATEST NEWS

ಕೇಂದ್ರ ಸರಕಾರದ ಮುದ್ರಾ ಯೋಜನೆ ಅನುಷ್ಠಾನ ಕರ್ನಾಟಕಕ್ಕೆ ಮೊದಲ ಸ್ಥಾನ

ಕೇಂದ್ರ ಸರಕಾರದ ಮುದ್ರಾ ಯೋಜನೆ ಅನುಷ್ಠಾನ ಕರ್ನಾಟಕಕ್ಕೆ ಮೊದಲ ಸ್ಥಾನ

ಮಂಗಳೂರು ಅಕ್ಟೋಬರ್ 16: ಬಿಜೆಪಿಯ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ಮುದ್ರಾ , ಕಾಂಗ್ರೇಸ್ ಸರಕಾರ ಇರುವ ಕರ್ನಾಟಕ ಅನುಷ್ಠಾನದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಮೋದಿಯವರು ದೇಶದ ಅಭಿವದ್ದಿಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ ಎನ್ನುವುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ ಅವರು, ಕೇಂದ್ರ ಸರಕಾರದ ಮುದ್ರಾ ಯೋಜನೆ ಬಿಜೆಪಿ ನೇತೃತ್ವದ ಸರಕಾರ ವಿರುವ ರಾಜ್ಯಗಳಿಗಿಂತ ಕಾಂಗ್ರೇಸ್ ಸರಕಾರ ಇರುವ ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿದೆ ಎಂದು ಇವರು ಹೇಳಿದರು.

ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮುದ್ರಾ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮುದ್ರಾ ಯೋಜನೆಯಡಿ ಕರ್ನಾಟಕದಲ್ಲಿ ಈವರೆಗೆ 27 ಲಕ್ಷ ಜನರಿಗೆ ಸಾಲ ನೀಡಲಾಗಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ನೀತಿ ಆಯೋಗದ ಜಂಟಿ ಆಶ್ರಯದಲ್ಲಿ ಮುದ್ರಾ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು .ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಉದ್ಘಾಟಿಸಿದರು .

ಕಳೆದ 70 ವರ್ಷಗಳ ಇತಿಹಾಸದಲ್ಲಿ ಮುದ್ರಾ ಯೋಜನೆ ದೇಶದ ಅತಿದೊಡ್ಡ ಸಾಲ ವಿತರಣಾ ಯೋಜನೆಯಾಗಿದ್ದು ಕರ್ನಾಟಕದಲ್ಲಿ ಈವರೆಗೆ 27 ಲಕ್ಷ ಜನರಿಗೆ ಸಾಲ ವಿತರಿಸಲಾಗಿದೆ ಎಂದು ಹೇಳಿದರು .ಮುದ್ರಾ ಯೋಜನೆಯ ಸಾಲ ವಿತರಣೆಯಲ್ಲಿ ಕರ್ನಾಟಕಕ್ಕೆ ನಂಬರ್ 1 ಸ್ಥಾನ ಲಭಿಸಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ಅಂಗವಾಗಿ ಮುದ್ರಾ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಕೌಶಲಾಭಿವೃದ್ಧಿ ಖಾತೆ ಸಚಿವ ಅನಂತ್ ಕುಮಾರ್ ಹೆಗ್ಡೆ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು .

Share Information
Continue Reading
Advertisement
Click to comment

Leave a Reply

Your email address will not be published. Required fields are marked *