LATEST NEWS
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಇನ್ನಿಲ್ಲ…!!
ಉತ್ತರ ಪ್ರದೇಶ ಅಕ್ಟೋಬರ್ 10: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ತೀವ್ರ ಅನಾರೋಗ್ಯದ ಹಿನ್ನಲೆ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನಲೆ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಅಕ್ಟೋಬರ್ 2 ರಂದು ದಾಖಲಿಸಲಾಗಿದ್ದು, ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
‘ನನ್ನ ಗೌರವಾನ್ವಿತ ತಂದೆಯವರು ಹಾಗೂ ಎಲ್ಲರ ನಾಯಕ ಇನ್ನಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿಳಿಸಿರುವುದಾಗಿ ಸಮಾಜವಾದಿ ಪಕ್ಷದ ಟ್ವಿಟರ್ ಪುಟದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.