Connect with us

LATEST NEWS

ಮುಲ್ಕಿ – ಕಾರು ಮತ್ತು ಬೈಕ್ ಅಪಘಾತ – ಬೈಕ್ ನಲ್ಲಿದ್ದ ಯುವತಿ ಸಾವು

ಮುಲ್ಕಿ ಅಗಸ್ಟ್ 16: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು ಗಾಯಾಳು ಬೈಕ್ ಸವಾರನನ್ನು ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ.


ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ.

https://youtu.be/meTD0QX4d24

Share Information
Continue Reading
Advertisement
Click to comment

Leave a Reply

Your email address will not be published. Required fields are marked *