LATEST NEWS
ಮುಲ್ಕಿ – ಲಾರಿಗೆ ಇನ್ನೋವಾ ಕಾರು ಡಿಕ್ಕಿ ಇಬ್ಬರಿಗೆ ಗಾಯ – ಕಾರಿನಲ್ಲಿದ್ದ ಪರ್ಸ್ ಎಟಿಎಂ ಕಾರ್ಡ್ ಕಳ್ಳತನ
ಮುಲ್ಕಿ ಡಿಸೆಂಬರ್ 13: ಲಾರಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ, ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೋವಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಚಾಲಕ ಕೊಕ್ಕರಕಲ್ ನಿವಾಸಿ ರೋಹನ್ ಹಾಗೂ ಪ್ರಯಾಣಿಕ ಅಂಗರಗುಡ್ಡೆ ನಿವಾಸಿ ರಮೇಶ್ ದೇವಾಡಿಗ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಬಳಿಕ ಸ್ವಲ್ಪ ಹೊತ್ತಿನಲ್ಲಿ ಕಾರಿನಲ್ಲಿದ್ದ ಪರ್ಸ್ ಹಾಗೂ ಎಟಿಎಂ ಕಾರ್ಡ್ ಅನ್ನು ಯಾರೋ ಕಳ್ಳತನ ಮಾಡಿದ್ದಾರೆ ಎಂದು ಕಾರಿನ ಮಾಲಕ ಕುಟ್ಟು ಯಾನೇ ರಮಾನಾಥ ಪೈ ದೂರಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಎರಡು ವಾಹನಗಳನ್ನು ತೆರವುಗೊಳಿಸಿದ್ದಾರೆ