LATEST NEWS
ಮುಲ್ಕಿ – ಮಳೆ ಅಬ್ಬರಕ್ಕೆ ಕುಸಿದ ಮನೆ… ಆರು ಮಂದಿ ಪವಾಡಸದೃಶ ಪಾರು
ಮಂಗಳೂರು ಜುಲೈ 24: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಮಳೆ ಅಬ್ಬರಕ್ಕೆ ಹಾನಿ ಕೂಡ ನಡೆದಿದೆ.
ಮಂಗಳೂರು ಹೊರವಲಯದ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಕೆಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲೋನಿಯಲ್ಲಿ ಮನೆ ಕುಸಿದು ಬಿದ್ದು ಹಾನಿಯಾಗಿದೆ. ಶ್ರೀ ಮಲ್ಲಿಕಾರ್ಜುನ ಮಠದ ಬಳಿಯ ನಿವಾಸಿ ಲಕ್ಷ್ಮಿ ಪಕೀರಪ್ಪ ಎಂಬುವರ ಮನೆ ಸಂಪೂರ್ಣ ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ರಾತ್ರಿ ಹೊತ್ತು ಮಳೆ ಸುರಿದಿದ್ದು, ಮನೆಯ ಮೇಲ್ಭಾಗದಲ್ಲಿ ಭಾರಿ ಶಬ್ದ ಉಂಟಾಗಿದೆ. ಈ ಸಂದರ್ಭ ಮನೆಯೊಳಗಿದ್ದ ಲಕ್ಷ್ಮಿ ಪಕೀರಪ್ಪ ಸಹಿತ ಆರು ಮಂದಿ ಹೊರಗೆ ಓಡಿ ಬಂದ ಕ್ಷಣಾರ್ಧದಲ್ಲಿ ಮನೆ ಪೂರಾ ಕುಸಿದು ಬಿದ್ದಿದ್ದು, ಮನೆ ಮಂದಿ ಪಾರಾಗಿದ್ದಾರೆ. ಘಟನೆಯಿಂದ ಮನೆ ಹಾಗೂ ಮನೆಯೊಳಗಿನ ವಸ್ತುಗಳಿಗೆ ಹಾನಿಯಾಗಿದ್ದು, ಬಾರಿ ನಷ್ಟ ಉಂಟಾಗಿದೆ.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.