Connect with us

    LATEST NEWS

    ಮಂಗಳೂರು – ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆ

    ಮಂಗಳೂರು ನವೆಂಬರ್ 16 : ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಬಿಡುಗಡೆಗೊಳಿಸಿದರು.

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಹಾಗೂ ದ.ಕ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆಯಲಿದೆ.

    ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಂಛನ ಬಿಡುಗಡೆಯ ಸರಳ ಸಮಾರಂಭದಲ್ಲಿ ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಮಂಗಳೂರು ಮ.ನ.ಪಾ ಕಮಿಶನರ್ ಕೆ.ಎಲ್. ಆನಂದ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *