ಹೈದರಾಬಾದ್, ಮಾರ್ಚ್ 30: ಬಹುಭಾಷಾ ನಟ ರಾಜಕಾರಣಿ ಪ್ರಕಾಶ್ ರಾಜ್ ಅವರಿಗೆ ಮಾತೃ ವಿಯೋಗವಾಗಿದೆ. ಮಾರ್ಚ್ 30ರಂದು ಬೆಳಗ್ಗೆ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ(85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವರ್ಣಲತಾ ಅವರು ಪ್ರಕಾಶ್ ರಾಜ್ ಅವರ ಹೈದರಾಬಾದ್ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಮಾರ್ಚ್ 30ರಂದು ಬೆಳಗ್ಗೆ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ(85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವರ್ಣಲತಾ ಅವರು ಪ್ರಕಾಶ್ ರಾಜ್ ಅವರ ಹೈದರಾಬಾದ್ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ಬಗ್ಗೆ ಕುಟುಂಬಸ್ಥರು ನಿರ್ಧರಿಸಲಿದ್ದಾರೆ ಎನ್ನಲಾಗಿದೆ. ಪ್ರಕಾಶ್ ರಾಜ್ ಮಾರ್ಚ್ 26, 1965ರಂದು ಜನಿಸಿದರು. ಅವರು ನಟ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಟಿವಿ ನಿರೂಪಕ ಮತ್ತು ರಾಜಕಾರಣಿಯೂ ಹೌದು. ತಮಿಳು , ತೆಲುಗು , ಕನ್ನಡ , ಮಲಯಾಳಂ , ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಸಿನಿಮಾಗಳಲ್ಲಿ ಅವರ ಅಭಿನಯಕ್ಕೆ ಹೆಸರುವಾಸಿಯಾಗಿದ್ದಾರೆ.
ಸ್ವರ್ಣಲತಾ ತಮ್ಮ ಮಗ ಪ್ರಕಾಶ್ ರಾಜ್ ಅವರ ಜೀವನದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಹಲವು ಸಂದರ್ಭಗಳಲ್ಲಿ ಪ್ರಕಾಶ್ ರಾಜ್ ಅವರು ತಮ್ಮ ತಾಯಿಯ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದು, ಅವರ ಬೆಂಬಲ, ಪ್ರೀತಿ, ಮಾರ್ಗದರ್ಶನ ಮತ್ತು ಪ್ರೇರಣೆಯೇ ತನ್ನ ಜೀವನದ ಸಾಧನೆಗಳಿಗೆ ಶಕ್ತಿಯಾಗಿತ್ತು ಎಂದು ಅವರು ಅನೇಕ ಬಾರಿ ಕೃತಜ್ಞತೆಯಿಂದ ಸ್ಮರಿಸುತ್ತಿದ್ದರು.
ಇಂದು ಸಂಜೆ ಬೆಂಗಳೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬಸ್ಥರು, ಸ್ನೇಹಿತರು ಮತ್ತು ಆತ್ಮೀಯರು ಭಾಗಿಯಾಗಲಿದ್ದಾರೆ. ಚಿತ್ರರಂಗದ ಅನೇಕ ಗಣ್ಯರು ಮತ್ತು ಅಭಿಮಾನಿಗಳು ಸ್ವರ್ಣಲತಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.