LATEST NEWS
ರಸ್ತೆ ಬದಿ ಡಾಬಾಕ್ಕೆ ಡಿಕ್ಕಿ ಹೊಡೆದ ಟ್ರಕ್ – 10 ಮಂದಿ ಸಾವು…!!

ಮುಂಬೈ ಜುಲೈ 04: ಕಂಟೈನರ್ ಟ್ರಕ್ ವೊಂದು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಡಾಬಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿದ ಘಟನೆ ಮುಂಬೈ ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ.
ಹೆದ್ದಾರಿಯ ಮಧ್ಯೆ ಟ್ರಕ್‌ನ ಬ್ರೇಕ್ ಫೇಲ್ ಆಗಿದ್ದು, ವಾಹನವನ್ನು ನಿಯಂತ್ರಿಸಲು ಚಾಲಕ ವಿಫಲನಾಗಿದ್ದಾನೆ. ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್ ನಂತರ ಹೆದ್ದಾರಿಯ ಬದಿಯಲ್ಲಿರುವ ಬಸ್ ನಿಲ್ದಾಣದ ಸಮೀಪದ ಹೋಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರು ಸೇರಿದ್ದಾರೆ. ಗಾಯಾಳುಗಳನ್ನು ಶಿರ್ಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ‘ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನೆರ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆಗೆ ಅಪಘಾತ ಸಂಭವಿಸಿದೆ. ಟ್ರಕ್ ಮಧ್ಯಪ್ರದೇಶದಿಂದ ಧುಲೆ ಕಡೆಗೆ ಸಂಚರಿಸುತ್ತಿತ್ತು ಎಂದು ತಿಳಿದುಬಂದಿದೆ.