LATEST NEWS
ರೆಷ್ಮೇ ಸೀರೆಯಲ್ಲಿ 4 ಕೋಟಿ ಬೆಲೆಯ ಅಮೇರಿಕನ್ ಡಾಲರ್…!!

ಮುಂಬೈ ನವೆಂಬರ್ 03: ಮುಂಬೈ ಕಸ್ಸಮ್ಸ್ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ದಂಧೆಯನ್ನು ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 4.1 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಒಂದೇ ಕುಟುಂಬದ ಮೂವರನ್ನು ಬಂಧಿಸಿದ್ದಾರೆ.
ಕಸ್ಟಮ್ಸ್ ಇಲಾಖೆಯ ಪ್ರಕಾರ, ಫ್ಲೈ ದುಬೈ ಫ್ಲೈಟ್ ಎಫ್‌ಜೆಡ್ 446 ಮೂಲಕ ದುಬೈಗೆ ಹೊರಟಿದ್ದ ಮೂವರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಅವರು $ 4,97,000 ಸರಿಸುಮಾರು 4.1 ಕೋಟಿ ಭಾರತೀಯ ರೂಪಾಯಿಗಳನ್ನು ವಶಪಡಿಸಿಕೊಂಡರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೂವರನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ನಡೆಯುತ್ತಿರುವುದರಿಂದ ಪ್ರಯಾಣಿಕರ ಹೆಸರುಗಳನ್ನು ಬಹಿರಂಗಪಡಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.