LATEST NEWS
ಮುಂಬೈ – 20 ಅಂತಸ್ತಿನ ಕಟ್ಟದಲ್ಲಿ ಬೆಂಕಿ ಅನಾಹುತ – 7 ಮಂದಿ ಸಾವು

ಮುಂಬೈ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿಯ 20 ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಟ್ಟಡದ 15ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ 19ನೇ ಅಂತಸ್ತಿನವರೆಗೂ ಹಬ್ಬಿದೆ. ಇದರ ಪರಿಣಾಮ ಭಾರೀ ಪ್ರಮಾಣ ಹಾನಿಯುಂಟಾಗಿದೆ ಎಂದು ಹೇಳಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ 21 ಅಗ್ನಿಶಾಮಕ ವಾಹನಗಳೊಂದಿಗೆ ದೌಡಾಯಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ದುರ್ಘಟನೆಯಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದು ಬಂದಿಲ್ಲ. ಗಾಯಾಳುಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಮೂವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ಎಂತಿದ್ದುದಾರೆಂದು ತಿಳಿದುಬಂದಿದೆ.