Connect with us

LATEST NEWS

ಐಪಿಎಲ್ ಶುರುವಾಗುವ ಮುನ್ನವೇ ವಿಶೇಷ ದಾಖಲೆ ಬರೆದ ಮುಂಬೈ ಇಂಡಿಯನ್ಸ್!

ಬೆಂಗಳೂರು: ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 4 ಬಾರಿ ಪ್ರಶಸ್ತಿ ಜಯಿಸಿದ ಏಕೈಕ ತಂಡವೆಂಬ ದಾಖಲೆಯನ್ನು ಹೊಂದಿರುವ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇದೀಗ 13ನೇ ಆವೃತ್ತಿ ಆರಂಭವಾಗುವುದಕ್ಕೆ ಮುನ್ನವೇ ಮತ್ತೊಂದು ವಿಶೇಷ ದಾಖಲೆ ಬರೆದಿದೆ! ಅದೇನೆಂದರೆ, ಇನ್‌ಸ್ಟಾಗ್ರಾಂನಲ್ಲಿ 5 ದಶಲಕ್ಷ ಹಿಂಬಾಲಕರನ್ನು ಸಂಪಾದಿಸಿದ ಮೊದಲ ಐಪಿಎಲ್ ತಂಡವೆಂಬ ಹೆಗ್ಗಳಿಕೆ ಈಗ ರೋಹಿತ್ ಶರ್ಮ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದ್ದಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ನಂತರದಲ್ಲಿ 3 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡವಿದ್ದು, ಇನ್‌ಸ್ಟಾಗ್ರಾಂನಲ್ಲಿ 4.8 ದಶಲಕ್ಷ ಹಿಂಬಾಲಕರನ್ನು ಹೊಂದಿದೆ. ವಿರಾಟ್ ಕೊಹ್ಲಿ ಸಾರಥ್ಯದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ 3ನೇ ಸ್ಥಾನದಲ್ಲಿದ್ದು, 4 ದಶಲಕ್ಷ ಹಿಂಬಾಲಕರನ್ನು ಹೊಂದಿದೆ.

ಬಾಲಿವುಡ್ ನಟ ಶಾರುಖ್ ಖಾನ್ ಸಹ-ಮಾಲೀಕತ್ವದ ಕೋಲ್ಕತ ನೈಟ್‌ರೈಡರ್ಸ್‌ ತಂಡದ 4ನೇ ಸ್ಥಾನದಲ್ಲಿದ್ದು, 1.7 ದಶಲಕ್ಷ ಹಿಂಬಾಲಕರನ್ನು ಹೊಂದಿದೆ. ಸನ್‌ರೈಸರ್ಸ್‌ ತಂಡ 1.5 ದಶಲಕ್ಷ ಹಿಂಬಾಲಕರೊಂದಿಗೆ 5ನೇ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ತಲಾ 1.4 ದಶಲಕ್ಷ ಹಿಂಬಾಕರನ್ನು ಹೊಂದಿವೆ. ರಾಜಸ್ಥಾನ ರಾಯಲ್ಸ್ ತಂಡ 1 ದಶಲಕ್ಷ ಹಿಂಬಾಲಕರನ್ನು ಹೊಂದಿದ್ದು, ಕೊನೆಯ ಸ್ಥಾನದಲ್ಲಿದೆ.

Facebook Comments

comments