LATEST NEWS
ಜೆಎಸ್‌ಡಬ್ಲ್ಯು ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ನಟಿ

ಮುಂಬೈ ಡಿಸೆಂಬರ್ 17: ದೇಶದ ಪ್ರತಿಷ್ಠಿತ ಸಂಸ್ಥೆಯಾದ ಜೆಎಸ್‌ಡಬ್ಲ್ಯು ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಹಿಳೆ ವೃತ್ತಿಯಲ್ಲಿ ವೈದ್ಯೆ ಹಾಗೂ ನಟಿಯಾಗಿರುವ ಮುಂಬೈ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸ್ ಠಾಣೆಯಲ್ಲಿ ಜಿಂದಾಲ್ ವಿರುದ್ಧ ಐಪಿಸಿ ಸೆಕ್ಷನ್ 376, 354 ಮತ್ತು 503 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಮಾಹಿತಿ ಗಳ ಪ್ರಕಾರ ಸಜ್ಜನ್ ಜಿಂದಾಲ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸಲು ಮಹಿಳೆಯ ಪೊಲೀಸ್ ಠಾಣೆಗೆ ತೆರಳಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಈ ಹಿನ್ನಲೆ ಇದೀಗ ಸಂತ್ರಸ್ಥ ಮಹಿಳೆ ಹೈಕೋರ್ಟ್ ಮೂಲಕ ಎಫ್ಐಆರ್ ದಾಖಲಿಸಿದ್ದಾರೆ.
ಮಹಿಳೆಯ ದೂರಿನ ಪ್ರಕಾರ, ಸಜ್ಜನ್ ಜಿಂದಾಲ್ ಮತ್ತು ಮಹಿಳೆ 2021 ರಲ್ಲಿ ಭೇಟಿಯಾಗಿದ್ದರು ಮತ್ತು ದುಬೈನಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ವಿಐಪಿ ಬಾಕ್ಸ್‌ನಲ್ಲಿ ಕುಳಿತಿದ್ದರು. ನಂತರ ಅವರು ಕೆಲವು ಬಾರಿ ಭೇಟಿಯಾದಾಗ ಜಿಂದಾಲ್ ಅವಳನ್ನು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕವಾಗಿ ಉಪಯೋಗಿಸಲು ಪ್ರಯತ್ನಿಸಿದಾಗ ಮಹಿಳೆ ಅದನ್ನು ತಡೆದಿದ್ದಾರೆ. ಆದರೆ ಜನವರಿ 24, 2022 ರಂದು ಸಜ್ಜನ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ದೂರಿನಲ್ಲಿ, ಮಹಿಳೆ ಜಿಂದಾಲ್ ನಂತರ ತನ್ನಲ್ಲಿ ಕ್ಷಮೆಯಾಚಿಸಿದರು. ಅಲ್ಲದೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಲಾಗಿದೆ.

ಈ ನಡುವೆ ಕೇಸ್‌ನಲ್ಲಿ ಎಫ್‌ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದನ್ನು ಮುಂಬೈ ಪೊಲೀಸರು ನಿರಾಕರಿಸಿದ್ದಾರೆ. ಅದಲ್ಲದೆ, ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ದೂರುದಾರರು ತಿಳಿಸಿದ್ದಾರೆ.
ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆ ಇದೀಗ ಸಜ್ಜನ್ ಜಿಂದಾಲ್ ವಿರುದ್ದ ಎಫ್ಐಆರ್ ದಾಖಲಾಗುವಂತೆ ಆದೇಶ ತಂದಿದ್ದಾರೆ. ಇದೀಗ ಜಿಂದಾಲ್ ವಿರುದ್ಧ ಸೆಕ್ಷನ್ 376 (ಅತ್ಯಾಚಾರ), 354 (ಹೆಣ್ಣಿನ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ದಾಖಲಿಸಲಾಗಿದೆ.