Connect with us

    LATEST NEWS

    12 ಗಂಟೆಗಳ ಕಾಲ 16 ರ ಬಾಲಕಿ ಮೇಲೆ 8 ಕಾಮುಕರಿಂದ ಅತ್ಯಾಚಾರ…!!

    ಮುಂಬೈ ಡಿಸೆಂಬರ್ 19 : 16 ವರ್ಷ ವಯಸ್ಸಿನ ಬಾಲಕಿ ಮೇಲೆ 8 ಕಾಮುಕರು ಸತತ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.


    16 ವರ್ಷದ ಬಾಲಕಿಗೆ ವ್ಯಕ್ತಿಯೊಬ್ಬ ಆಮಿಷವೊಡ್ಡಿ ಖಾಲಿ ಬಂಗಲೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಮಾರನೇ ದಿನದ ಬೆಳಗ್ಗಿನವರೆಗೂ ಅತ್ಯಾಚಾರ ಎಸಗಿದ್ದಾರೆ. ಆಕೆಯನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲೂ ಅತ್ಯಾಚಾರವೆಸಗಿದ್ದಾರೆ. ಅದಾದ ಬಳಿಕ ಪೊದೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿ ಬಾಲಕಿಯು ಪೊಲೀಸರಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿ ಬಾಲಕಿಯ ದೂರಿನ ಮೇರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ (Arrest) ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply