ಮುಂಡ್ಕೂರು ಫೆಬ್ರವರಿ 15: ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಅವರು (60) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾಸರಗೋಡಿನಲ್ಲಿ ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು. ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ, ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರದಲ್ಲಿ ನಿರಂತರ ಕೋಲ, ಅಗೇಲು ಸೇವೆಗಳು ನಡೆಯುತ್ತಿದ್ದವು.
ಮೃತರ ನಿಧನಕ್ಕೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಮುಂಬಯಿನ ಉದ್ಯಮಿ ಐಕಳ ಗಣೇಶ್ ಶೆಟ್ಟಿ, ಕಂಬಳ ಕ್ಷೇತ್ರದ ಬೋಳದಗುತ್ತು ಸತೀಶ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ . ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.