ಕೇರಳ ಕೊಲೆಯತ್ನ ಪ್ರಕರಣದ ಆರೋಪಿ ಕಡಬದಲ್ಲಿ ಆರೆಸ್ಟ್

ಪುತ್ತೂರು ಮಾರ್ಚ್ 20: ಕೇರಳದಲ್ಲಿ ಕೊಲೆಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರ ಸಹಕಾರದೊಂದಿಗೆ ಕೇರಳ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಲ್ಲಂ ಠಾಣಾ ವ್ಯಾಪ್ತಿಯಲ್ಲಿ 307 ಕೇಸು ದಾಖಲಾಗಿದ್ದು, ಈತ ತಲೆಮರೆಸಿಕೊಂಡಿದ್ದ.

ಆರೋಪಿಯು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಡುಪು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರದಂದು ಕಡಬಕ್ಕೆ ಆಗಮಿಸಿದ ಕೇರಳದ ಕೊಲ್ಲಂ ಠಾಣಾ ಪೋಲೀಸರು ಬಂಧಿತರು